ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಸಚಿವ ಅನುರಾಗ್‍ಸಿಂಗ್ ಠಾಕೂರ್ ಕಿಡಿ

ನವದೆಹಲಿ,ಮಾ.10- ಕಾಶ್ಮೀರದ ಪತ್ರಿಕಾ ಸ್ವಾತಂತ್ರ್ಯದ ಕುರಿತು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿದ ವರದಿ ದುಷ್ಕ್ರತ್ಯ ಮತ್ತು ಕಾಲ್ಪನಿಕ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ಭಾರತದ ಬಗ್ಗೆ ವರದಿಯನ್ನು ಪ್ರಕಟಿಸುವಾಗ ತಟಸ್ಥತೆ ನೀತಿ ಅನುಸರಿಸುವುದನ್ನು ಬಹಳ ಹಿಂದೆಯೇ ಕೈಬಿಟ್ಟಿದೆ. ಕಾಶ್ಮೀರದ ಪತ್ರಿಕಾ ಸ್ವಾತಂತ್ರ್ಯದ ಕುರಿತು ನ್ಯೂಯಾರ್ಕ್ ಟೈಮ್ಸ್ ವ್ಯಕ್ತಪಡಿಸಿರುವ ಅಭಿಪ್ರಾಯವು ಚೇಷ್ಟೆ ಮತ್ತು ಕಾಲ್ಪನಿಕವಾಗಿದೆ, ಇದು ಭಾರತೀಯ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ವಿರುದ್ಧ ಅಪಪ್ರಚಾರವನ್ನು ಹರಡುವ ಏಕೈಕ ಉದ್ದೇಶ ಹೊಂದಿದೆ […]
ಸಾರ್ವಕರ್ ಫೋಟೋ ಏಕೆ..? ನಮ್ಮ ರಾಜ್ಯದ ಮಹನೀಯರಿಲ್ಲವೆ..? : ಎಂ.ಬಿ.ಪಾಟೀಲ್
ಬೆಂಗಳೂರು,ಆ.24- ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ನಮ್ಮ ರಾಜ್ಯದ ನಾಯಕರು ಹಾಗೂ ದಾರ್ಶನಿಕರ ಫೋಟೋ ಇಟ್ಟು ಗಣಪತಿ ಪೂಜೆ ಮಾಡಿ, ಅದರ ಬದಲು ಸಾರ್ವಕರ್ ಫೋಟೋ ಏಕೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಕರ್ ಯಾಕೆ ನಮ್ಮಲ್ಲಿ ಹಲವು ಮಹನೀಯರು ಇಲ್ಲವೇ? ಸಾರ್ವಕರ್ ಬದಲಾಗಿ ಕಿತ್ತೂರು ಚೆನ್ನಮ್ಮನವರ ಫೋಟೊ ಹಾಕಿ, ಬಸವಣ್ಣ, ಸಂಗೊಳ್ಳಿ ರಾಯಣ್ಣ, ಸುರಪುರದ ನಾಯಕರು, ಕೆಂಪೇಗೌಡರ ಫೋಟೊ ಇಟ್ಟು ಪೂಜೆ ಮಾಡಿ ಎಂದು ಸಲಹೆ ನೀಡಿದರು. ನಾನು […]
ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವ ಸಲ್ಲಿಸಿದ ರಾಜ್ಯಪಾಲರು
ಬೆಂಗಳೂರು,ಆ.9- ಬ್ರಿಟೀಷರೇ ಭಾರತ ಬಿಟ್ಟು ತೊಲಗಿ (ಕ್ವಿಟ್ ಇಂಡಿಯಾ) ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ನಗರದ ಮೂವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸಿಹಿ ತಿನಿಸುವ ಮೂಲಕ ಗೌರವ ಸಲ್ಲಿಸಿದರು. ಈ ವಿಶೇಷ ಕ್ಷಣಗಳಿಗೆ ಸಚಿವರಾದ ಆರ್ ಅಶೋಕ್, ಅಶ್ವತ್ಥ ನಾರಾಯಣ ಸಾಕ್ಷಿಯಾದರು. ಇಂದು ಬೆಳಿಗ್ಗೆ ಮೊದಲಿಗೆ ಜೆಪಿನಗರದ […]
ಡಿಕೆಶಿಯವರೇ ಯಾರ ಸ್ವಾತಂತ್ರ್ಯಕ್ಕಾಗಿ ನಿಮ್ಮ ಈ ನಡಿಗೆ..?
ಬೆಂಗಳೂರು, ಆ.9- ಸ್ವಾತಂತ್ರ್ಯೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಬಿಡಿಸಿ ಹೇಳುವಿರಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ ಎಂದು ಕೇಳಿದ್ದಾರೆ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ ಎಂದು […]
ಭ್ರಷ್ಟಾಚಾರ, ಭಯೋತ್ಪಾದನೆ, ಬಡತನ ತೊಲಗಿಸುವ ಚಳುವಳಿ ಅಗತ್ಯ : ಮೋದಿ
ನವದೆಹಲಿ,ಆ.9- ಕ್ವಿಟ್ ಇಂಡಿಯಾ ಚಳುವಳಿ ಸಂಸ್ಮರಣಾ ದಿನವಾದ ಇಂದು ಪ್ರಧಾನಿ ನರೇಂದ್ರಮೋದಿ ದೃಶ್ಯ ಸಂಕಲನದ ಮೂಲಕ ಸ್ಪೂರ್ತಿದಾಯಕವಾದ ಮಾತುಗಳ ಸಂದೇಶವನ್ನು ಸಾರಿದ್ದಾರೆ. ಸ್ವಾತಂತ್ರ್ಯ ಪೂರ್ವ ಆಗಸ್ಟ್ ತಿಂಗಳಿನಲ್ಲಿ ಹಲವಾರು ಮಹತ್ವಪೂರ್ಣ ಘಟನೆಗಳು ಸಂಭವಿಸಿವೆ. 1942, ಆ.9ರಂದು ಮಹಾತ್ಮ ಗಾಂಧೀಜಿಯವರು ಕ್ವಿಟ್ ಇಂಡಿಯಾ( ಭಾರತ ಬಿಟ್ಟು ತೊಲಗಿ) ಚಳುವಳಿಯನ್ನು ಆರಂಭಿಸಿದರು. ಈ ಅಭಿಯಾನದಲ್ಲಿ ದೇಶವಾಸಿಗಳು ಯಾವುದೇ ಬೇಧಭಾವವಿಲ್ಲದೆ ತಮ್ಮನ್ನು ತೊಡಗಿಸಿಕೊಂಡರು. ಬಹಳಷ್ಟು ಮಂದಿ ಓದುವುದನ್ನು ಬಿಟ್ಟರು, ಸರ್ಕಾರಿ ಕೆಲಸ ತೊರೆದರು, ಮನೆ ಬಿಟ್ಟು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ […]
ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ, ಮತಾಂತರ ನಿಷೇಧ ಮಸೂದೆ ಮಂಡಿಸಲು ಸಿದ್ಧತೆ
ಬೆಂಗಳೂರು,ಆ.6- ವಿಧಾನಪರಿಷತ್‍ನಲ್ಲಿ ಆಡಳಿತಾರೂಢ ಬಿಜೆಪಿಗೆ ಪೂರ್ಣ ಬಹುಮತ ಲಭಿಸಿರುವ ಕಾರಣ ಮುಂಬರುವ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವತಂತ್ರ ಹಕ್ಕು ಸಂರಕ್ಷಣಾ( ಮತಾಂತರ ನಿಷೇಧ) ಮಸೂದೆಯನ್ನು ಮಂಡಿಸಲು ತೀರ್ಮಾನಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೇಲ್ಮನೆಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ವಿಧಾನಪರಿಷತ್‍ನ ಒಟ್ಟು 75 ಸದಸ್ಯ ಬಲದಲ್ಲಿ ಬಿಜೆಪಿಗೆ 40 ಸ್ಥಾನಗಳು ಇರುವುದರಿಂದ ಮುಂಬರುವ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಮಂಡಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲು ತೀರ್ಮಾನಿಸಿದೆ. ಕಳೆದ […]