ನೀರಾವರಿ ಯೋಜನೆಗಳಿಗೆ ಪರಿಹಾರ ನೀಡಲು ಹಣಕಾಸಿನ ಸಮಸ್ಯೆ ಇಲ್ಲ : ಮಾಧುಸ್ವಾಮಿ

ಬೆಳಗಾವಿ,ಡಿ.27-ನೀರಾವರಿ ಯೋಜನೆಗಳಿಗೆ ಪರಿಹಾರ ನೀಡಲು ಹಣಕಾಸಿನ ಸಮಸ್ಯೆ ಇಲ್ಲವೇ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದರು. ಶಾಸಕ ಈಶ್ವರ್ ಬಿ.ಖಂಡ್ರೆ ಅವರು, ಈ ಹಿಂದೆ ನೀರಾವರಿ ಯೋಜನೆಗಳಿಗೆ ಭೂಸ್ವಾೀಧಿನ ಮಾಡಿಕೊಳ್ಳುವ ವೇಳೆ ನೂರೆಂಟು ಸಮಸ್ಯೆಗಳು ಉಂಟಾಗಿ ಯೋಜನೆ ವಿಳಂಬವಾಗುತ್ತಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂಸ್ವಾೀಧಿನಕ್ಕಾಗಿ ವಿಶೇಷ ಅನುದಾನವನ್ನು ಮೀಸಲಿಟ್ಟಿದ್ದಾರೆ. ಹೀಗಾಗಿ ಅನುದಾನದ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಹೇಳಿದರು. ಬೀದರ್ ಜಿಲ್ಲೆ ಮಾಂದ್ರ ನದಿಪಾತ್ರದಲ್ಲಿ 4.8 ಟಿಎಂಸಿ ನೀರಿನ ಲಭ್ಯತೆ ಇದೆ. […]

565 ಕೋಟಿ ರೂ. ಚಿಟ್ ಫಂಡ್ ಅಕ್ರಮ ಪ್ರಕರಣ : ಸಿಬಿಐನಿಂದ ನಾಲ್ವರ ಬಂಧನ

ಕೋಲ್ಕತ್ತಾ, ಸೆ.28 – ಸುಮಾರು 565 ಕೋಟಿ ರೂ. ಚಿಟ್ ಫಂಡ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಕೋಲ್ಕತ್ತಾದಲ್ಲಿ ಇಂದು ದಾಳಿ ನಡೆಸಿ ಕಂಪನಿ ವ್ಯವಹಾರಗಳ ಮಾಜಿ ಉಪ ರಿಜಿಸ್ಟ್ರಾರ್ ಮತ್ತು ಇತರೆ ಮೂವರನ್ನು ಬಂಧಿಸಿದೆ. ಖಾಸಗಿ ಕಂಪನಿಗಳ ಸಂಸ್ಥಾಪಕ ನಿರ್ದೇಶಕರು ಮತ್ತು ಇಬ್ಬರು ಪ್ರಾದೇಶಿಕ ವ್ಯವಸ್ಥಾಪಕರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನಿನಿಟಿ ರಿಯಲ್ಕಾನ್ ಲಿಮಿಟೆಡ್ ಹೆಸರಿನಲ್ಲಿ ಒಡಿಶಾದಲ್ಲಿ ಜನರನ್ನು ಆಕರ್ಷಿಸಿ, ಹೆಚ್ಚಿನ ಆದಾಯ ನೀಡುವ ಭರವಸೆ ನೀಡಿ 565 ಕೋಟಿ ರೂ.ಠೇವಣಿಯನ್ನು ಅಕ್ರಮವಾಗಿ […]

ಗೊಟಬಯ ರಾಜಪಕ್ಸೆ ಅಕ್ರಮಗಳ ವಿರುದ್ಧ ತನಿಖೆಗೆ ಪ್ರತಿಪಕ್ಷಗಳ ಆಗ್ರಹ

ಕೊಲೊಂಬೊ,ಆ.21- ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವೆ ಜನಾಕ್ರೋಶಕ್ಕೆ ಹೆದರಿ ದೇಶಭ್ರಷ್ಟರಾಗಿರುವ ಶ್ರೀಲಂಕಾದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಅಕ್ರಮಗಳ ವಿರುದ್ಧ ವಿಚಾರಣೆ ನಡೆಸಬೇಕು ಎಂದು ಪ್ರತಿಪಕ್ಷ ಆಗ್ರಹಿಸಿದೆ. ಶ್ರೀಲಂಕಾದ ಪ್ರಮುಖ ಪ್ರತಿಪಕ್ಷವಾಗಿರುವ ಸಮಗಿಜನ ಬಲವೇಗಯ, ಗೊಟಬಯ ಈ ದೇಶದ ಪ್ರಜೆ. ಅವರು ತಾಯ್ನಾಡಿಗೆ ಮರಳಲು ಎಲ್ಲ ಅಧಿಕಾರ ಹೊಂದಿದ್ದಾರೆ. ಅದನ್ನು ತಡೆಯಲು ಯಾರಿಗೂ ಅಧಿಕಾರ ಇಲ್ಲ. ಆದರೆ ಅಧಿಕಾರ ದುರುಪಯೋಗಪಡಿಸಿಕೊಂಡು ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಪಕ್ಷದ ಮುಖ್ಯ ಕಾಯ […]

ಸಹಕಾರ ಮಂಡಳದಿಂದ ಶಿಕ್ಷಣ ನಿಧಿಗೆ 2 ಕೋಟಿ ರೂ. ಚೆಕ್ ಹಸ್ತಾಂತರ

ಬೆಂಗಳೂರು,ಆ.16- ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಧಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಳಕ್ಕೆ ಹಸ್ತಾಂತರಿಸಲಾಯಿತು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಜಿ.ಟಿ.ದೇವೇಗೌಡರು, ಭಿನ್ನಾಭಿಪ್ರಾಯ ರಾಜಕೀಯವನ್ನು ಬಿಟ್ಟು, ಸಹಕಾರ ಕ್ಷೇತ್ರ ಉಳಿಸುವ ಕೆಲಸವನ್ನು ಮಾಡಬೇಕು. ಸಹಕಾರ ಕ್ಷೇತ್ರವನ್ನು ಮೆಟ್ಟಿಲಾಗಿ ಬಳಸಿಕೊಂಡು ರಾಜಕೀಯಕ್ಕೆ ಬರುತ್ತಾರೆ. ಶಾಸಕರು, […]