ಶಾಲೆಗಳಲ್ಲಿ ಪುನೀತ್ ಅಭಿನಯದ ಗಂಧದಗುಡಿ ಚಿತ್ರದ ಉಚಿತ ಪ್ರದರ್ಶನ ಏರ್ಪಡಿಸಿ

ಬೆಂಗಳೂರು,ನ.8- ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆ ಚಿತ್ರ ಗಂಧದ ಗುಡಿ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತ ಪ್ರದರ್ಶನ ನೀಡಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಸುನಿಲ್ ಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ. ಪುನೀತ್ ಅಭಿನಯದ ಗಂಧದ ಗುಡಿ ಚಿತ್ರದಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು, ವನ್ಯ […]

ಪುನೀತ್ ಪರ್ವ ಕಾರ್ಯಕ್ರಮಕ್ಕೆ ಸಿಎಂಗೆ ಅಹ್ವಾನ ನೀಡಿದ ಅಶ್ವಿನಿ

ಬೆಂಗಳೂರು,ಅ.11-ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಗಂಧಗುಡಿ ಪ್ರೀ ರಿಲೀಸ್ ಇವೆಂಟ್ ಪುನೀತ್ ಪರ್ವಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಿದರು. ಮುಖ್ಯಮಂತ್ರಿ ಭೇಟಿಯ ನಂತರ ಮಾತನಾಡಿದ ನಟ ರಾಘವೇಂದ್ರ ರಾಜ್‍ಕುಮಾರ್, ಅಕ್ಟೋಬರ್ 28ಕ್ಕೆ ಗಂಧದ ಗುಡಿ ಸಿನಿಮಾ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಅಕ್ಟೋಬರ್ 21ರಂದು ಗಂಧದ ಗುಡಿ ಪ್ರೀ ರಿಲೀಸ್ ಈವೆಂಟ್ ಇದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲು ಬಂದಿದ್ದೆವು ಎಂದರು. ದಕ್ಷಿಣ ಭಾರತದ ಚಿತ್ರರಂಗದ ತಾರೆಯರನ್ನು ಈ […]