ಗುಜರಾತ್‍ನ ವಡೋದರಾಲ್ಲಿ ಗಣೇಶ ಮೆರವಣಿಗೆ ವೇಳೆ ಘರ್ಷಣೆ, ಕಲ್ಲು ತೂರಾಟ
ವಡೋದರಾ, ಅ 30 -ಗುಜರಾತ್‍ನ ವಡೋದರಾ ನಗರದಲ್ಲಿ ಗಣೇಶ ಮೂರ್ತಿಯನ್ನು ಹೊತ್ತ ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಘರ್ಷಣೆ ಮತ್ತು ಕಲ್ಲು ತೂರಾಟ ಘಟನೆ ನಡೆದಿದೆ. ತಡರಾತ್ರಿ ಎರಡು ಸಮುದಾಯ ಗುಂಪುಗಳ ನಡುವೆ ನಡೆದ ದ ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 13 ಜನರನ್ನು ಬಂಸಲಾಗಿದೆ, ಕಲ್ಲು ತೂರಾಟದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಗಲಭೆ ಮತ್ತು ಕಾನೂನುಬಾಹಿರ ಸಭೆ ಆರೋಪದ ಮೇಲೆ ಎರಡೂ ಕಡೆಯ ಸದಸ್ಯರ ವಿರುದ್ಧ ವಡೋದರಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ರಾತ್ರಿ […]