ಗೌರಿ-ಗಣೇಶ ಹಬ್ಬ : ಗಗನಕ್ಕೇರಿದ ಹೂ-ಹಣ್ಣಿನ ಬೆಲೆ, ಆದರೂ ಮಾರುಕಟ್ಟೆಗಳಲ್ಲಿ ಜನಜಂಗುಳಿ

ಬೆಂಗಳೂರು,ಆ.29-ಕೊರೊನಾ ಕಾಟದಿಂದಾಗಿ ಕಳೆದ ಎರಡು ವರ್ಷಗಳಿಂದ ಹಬ್ಬ ಆಚರಿಸಲು ಸಾಧ್ಯವಾಗದ ಹಿನ್ನಲ್ಲೆಯಲ್ಲಿ ಈ ಬಾರಿ ಗೌರಿ-ಗಣೇಶ ಹಬ್ಬ ಕಳೆ ಕಟ್ಟಿದ್ದು, ಬೆಲೆ ಏರಿಕೆಯ ನಡುವೆಯೂ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಜನ ಗೌರಿ-ಗಣೇಶ ಹಬ್ಬಕ್ಕೆ ಭರ್ಜರಿ ಶಾಪಿಂಗ್ ನಡೆಸುತ್ತಿದ್ದಾರೆ. ಎರಡು ವರ್ಷಗಳ ನಂತರ ಹಬ್ಬ ಆಚರಣೆಗೆ ಅವಕಾಶ ಸಿಕ್ಕಿರುವುದರಿಂದ ಈ ಬಾರಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜನ ಮುಗಿಬಿದ್ದಿದ್ದಾರೆ. ಹೀಗಾಗಿ ನಗರದ ಕೆ.ಆರ್ ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ ಮಾತ್ರವಲ್ಲ ನಗರದಲ್ಲಿರುವ ಎಲ್ಲಾ ಮಾರುಕಟ್ಟೆಗಳಲ್ಲೂ ಜನ ಜಂಗುಳಿ ಕಂಡು […]