ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ : ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು, ಜು.27- ಭ್ರಷ್ಟಾಚಾರದ ಗಂಗೋತ್ರಿಯನ್ನೇ ಹೊತ್ತಿಕೊಂಡಿರುವ ಕಾಂಗ್ರೆಸ್‍ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಹಿಂದಿನ ಅಧ್ಯಕ್ಷ ರಾಹುಲ್‍ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡಿ ವಿಚಾರಣೆಗೆ ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದಾರೆ. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಗಂಗೋತ್ರಿ. ಮಾಡಬಾರದ್ದನ್ನೆಲ್ಲಾ ಮಾಡಿ ಈಗ ತನಿಖಾ ಸಂಸ್ಥೆಗಳ ವಿಚಾರಣೆ ಎದುರಿಸುವ ದುಸ್ಥಿತಿಗೆ ಬಂದಿದ್ದಾರೆ. […]