ಹೊತ್ತಿ ಉರಿದ ಕಸದ ರಾಶಿ, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ಬೆಂಗಳೂರು,ಫೆ.14- ಕಸದ ರಾಶಿ ಹಾಗೂ ಒಣಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಬಂಡೆಪಾಳ್ಯ ಪೊಲೀಸ ಠಾಣೆ ವ್ಯಾಪ್ತಿಯ ಬೊಮ್ಮನಹಳ್ಳಿಯ ತಗ್ಗು ಪ್ರದೇಶದಲ್ಲಿ ಬಿಬಿಎಂಪಿ ಹಾಗೂ ಸುತ್ತಮುತ್ತಲಿಂದ ಕಸ ತಂದು ಹಾಕಲಾಗಿತ್ತು. ನಿನ್ನೆ ಸಂಜೆ ಈ ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕಸದ ಸುತ್ತ ಇದ್ದ ಒಣಹುಲ್ಲಿಗೂ ತಾಗಿ ಬೆಂಕಿ ಆವರಿಸಿಕೊಂಡಿದೆ. ಸುದ್ದಿ ತಿಳಿದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ನಿರತರಾದರು. ಇಂದು […]