ಗೇಟ್ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ

ನವದೆಹಲಿ, ಫೆ.3- ದೇಶದಲ್ಲಿನ ಹಲವಾರು ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳು ಇರುವ ಹಿನ್ನೆಲೆಯಲ್ಲಿ ಫೆ.5ರಂದು ನಡೆಯಲು ನಿಗದಿಯಾಗಿರುವ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್ (ಗೇಟ್) ಪರೀಕ್ಷೆಯನ್ನು ಮುಂದೂಡಬೇಕೆಂಬ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನಿಗದಿತ ಅವಗೆ ಕೇವಲ 48 ಗಂಟೆಗೆ ಮುನ್ನ ಪರೀಕ್ಷೆಯನ್ನು ಮುಂದೂಡುವುದು ಗೊಂದಲ ಮತ್ತು ಅನಿಶ್ಚಿತತೆಯನ್ನುಂಟು ಮಾಡುತ್ತದೆ ಮತ್ತು ಈಗಾಗಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವಂತಾಗಬಾರದು ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂನಾಥ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ. ಇದು ಒಂದು ಶಿಕ್ಷಣ […]