ಜೆಎನ್‍ಯು ಹಲ್ಲೆ ಖಂಡಿಸಿ ಪ್ರತಿಭಟಿಸಿದವರ ಮೇಲಿನ ಪ್ರಕರಣ ರದ್ದು

ಮುಂಬೈ,ಜ.30- ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಗೇಟ್ವೆ ಆಫ್ ಇಂಡಿಯಾದಲ್ಲಿ ಪ್ರತಿಭಟನೆ ನಡೆಸಿದ್ದ 36 ಜನರ ವಿರುದ್ಧದ ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಸ್ಥಳೀಯ ನ್ಯಾಯಾಲಯ ಅನುಮತಿಸಿದೆ. ಆರೋಪಿಗಳು ಯಾವುದೇ ವೈಯಕ್ತಿಕ ಹಿತಾಸಕ್ತಿ ಅಥವಾ ಪ್ರಯೋಜನಗಳಿಲ್ಲದೆ ಆಪಾದಿತ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಎಸ್‍ಪ್ಲಾನೆಡ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ವಿ.ದಿನೋಕರ್ ಪ್ರಕರಣಗಳನ್ನು ಹಿಂಪಡೆಯಲು ಅನುಮತಿಸಿದ್ದಾರೆ. ಜನವರಿಯಲ್ಲಿ ಹೊರಡಿಸಲಾದ ಆದೇಶ ತಡವಾಗಿ ಬೆಳಕಿಗೆ ಬಂದಿದೆ. ಬಿಜೆಪಿಗೆ […]