ಸಂಕ್ರಾಂತಿಯಂದು ಗವಿಗಂಗಾಧರೇಶ್ವರನ ದರ್ಶನಕ್ಕೆ ಬ್ರೇಕ್

ಬೆಂಗಳೂರು,ಜ.12- ಇತಿಹಾಸ ಪ್ರಸಿದ್ದ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಸಂಕ್ರಾಂತಿ ದಿನದಂದು ಸೂರ್ಯಕಿರಣ ರಶ್ಮಿ ವೀಕ್ಷಣೆಗೆ ಈ ಬಾರಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗವಿಗಂಗಾಧರೇಶ್ವರ ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ಪ್ರತಿ ವರ್ಷ ಸಂಕ್ರಾಂತಿ ದಿನದಂದು ಸಂಜೆ 5.14ರಿಂದ 5.17ರವರೆಗೆ ಗವಿಗಂಗಾಧರೇಶ್ವರ ದೇವಸ್ಥಾನದ ಗರ್ಭಗುಡಿಯ ಶಿವಲಿಂಗದ ಮೇಲೆ ಸೂರ್ಯಕಿರಣ ರಶ್ಮಿ ಪ್ರವೇಶಿಸುವುದನ್ನು ಸಾವಿರಾರು ಜನರು ಕಣ್ತುಂಬಿಕೊಳ್ಳುತ್ತಿದ್ದರು. ಕೊರೊನಾ ಸೋಂಕು ವೇಗವಾಗ ಹರಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ […]