ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ

ಬೆಂಗಳೂರು,ಸೆ.29- ವಿಧಾನಮಂಡಲದ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ಎರಡು ಮಹತ್ವದ ವಿಧೇಯಕಗಳಿಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಠೇವಣಿದಾರರ ಹಿತರಕ್ಷಣೆ ಹಾಗೂ ಗೋಮಾಳದಂತಹ ಸರ್ಕಾರಿ ಭೂಮಿಗಳ ಸಾಗುವಳಿದಾರರಿಗೆ ನೆರವಾಗಲಿದೆ. ತಿದ್ದುಪಡಿ ವಿದೇಯಕಗಳನ್ನು ಆಧರಿಸಿ ರಾಜ್ಯ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕದನ್ವಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಡುವ ಠೇವಣಿದಾರರಿಗೆ ವಂಚಿಸುವ ಅಪರಾಧವನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಲು ಮತ್ತು ಇಂತಹ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ವಿಧೇಯಕದಲ್ಲಿ ಅವಕಾಶ […]