ಜಮ್ಮು-ಕಾಶ್ಮೀರದಲ್ಲಿ ಗುಲಾಂನಬಿ ಅಜಾದ್ ರ‍್ಯಾಲಿ
ಜಮ್ಮು,ಸೆ.4- ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಗುಲಾಂನಬಿ ಅಜಾದ್ ಇಂದು ತವರು ನೆಲ ಜಮ್ಮುಕಾಶ್ಮೀರದಲ್ಲಿ ಪ್ರಥಮ ರ‍್ಯಾಲಿ ನಡೆಸುತ್ತಿದ್ದಾರೆ. ಇದೇ ದಿನ ತವರು ನೆಲದಲ್ಲಿ ಹೊಸ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ. ಜಮ್ಮುಕಾಶ್ಮೀರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಇಂದು ಬೆಳಗ್ಗೆ ದೆಹಲಿಯಿಂದ ಪ್ರಯಾಣ ಆರಂಭಿಸಿದರು. ಹಲವು ಕಾರ್ಯಕ್ರಮಗಳು, ಸಾರ್ವಜನಿಕ ಸಭೆಗಳು ನಿಗದಿಯಾಗಿದ್ದು, ಅದರಲ್ಲಿ ಗುಲಾಂನಬಿ ಅಜಾದ್ ಭಾಗವಹಿಸಲಿದ್ದಾರೆ.ಕಾಂಗ್ರೆಸ್ ಜೊತೆಗಿನ 5 ದಶಕಗಳ ಸಂಬಂಧವನ್ನು ಕಡಿದುಕೊಂಡಿರುವ ಅವರು ಆ.26ರಂದು ಪಕ್ಷದ ಎಲ್ಲ ಸ್ಥಾನಗಳಿಗೂ […]
ಬಿಜೆಪಿ, RSSಗೆ ಹೆದರಿ ಗುಲಾಂನಬಿ ರಾಜೀನಾಮೆ ನೀಡಿದ್ದಾರೆ : ಖರ್ಗೆ
ಬೆಂಗಳೂರು,ಆ.27- ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂನಬಿ ಅಜಾದ್ ಬಿಜೆಪಿ, ಆರ್‍ಎಸ್‍ಎಸ್‍ಗೆ ಹೆದರಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಸರಿಯಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನಲ್ಲಿ ಗುಲಾಂನಬಿ ಅಜಾದ್ 46 ವರ್ಷದಿಂದ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರಗಳನ್ನು ಪಡೆದಿದ್ದಾರೆ. 6 ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು. 20ರಿಂದ 25 ವರ್ಷಗಳ ಕಾಲ ಸಚಿವರಾಗಿದ್ದರು. ಪಕ್ಷದ ಮಟ್ಟದಲ್ಲೂ ಅತ್ಯುತ್ತಮ ಸ್ಥಾನ ಪಡೆದಿದ್ದರು ಎಂದು ಹೇಳಿದರು. ಪ್ರಸ್ತುತ ಪಕ್ಷಕ್ಕೆ ಒಳ್ಳೆಯ ಪರಿಸ್ಥಿತಿ ಇಲ್ಲ. […]
ಕಾಂಗ್ರೆಸ್ ತೊರೆದ ಆಜಾದ್, ರಾಹುಲ್ ಅಪ್ರಬುದ್ಧತೆ ವಿರುದ್ಧ ಟೀಕೆ
ನವದೆಹಲಿ,ಆ.26- ಕಾಂಗ್ರೆಸ್‍ನ ಪ್ರಭಾವಿ ನಾಯಕರೊಲ್ಲಬರಾದ ಗುಲಾಂನಬಿ ಆಜಾದ್ ಇಂದು ಪಕ್ಷದ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ಕೈ ಪಡೆಗೆ ಆಘಾತ ಮೂಡಿಸಿದೆ. ಜಮ್ಮುಕಾಶ್ಮೀರ ಮೂಲದ ಗುಲಾಂ ನಬಿ ಆಜಾದ್ ಪಕ್ಷದ ಮುಂಚೂಣಿ ನಾಯಕರಲ್ಲಿ ಮೊದಲಿಗರಾಗಿದ್ದರು. ರಾಜೀವ್ ಗಾಂಧಿ ಅವರ ನಂತರ ಪಕ್ಷದಲ್ಲಿ ಗುಲಾಂ ನಬಿ ಆಜಾದ್ ಅವರ ಮಾತಿಗೆ ಹೆಚ್ಚಿನ ಮನ್ನಣೆ ಇತ್ತು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆಜಾದ್ ಅವರಿಗೆ ಅಳತೆ ಮೀರಿ ಅವಕಾಶಗಳನ್ನು ನೀಡಿದ್ದರು ಎಂಬ ಆಕ್ಷೇಪಗಳು ಇದ್ದವು. ರಾಜ್ಯಸಭೆಯ ಪ್ರತಿಪಕ್ಷದ ನಾಯಕನ […]