ಕಳಸ – ಬಂಡೂರಿ ತಡೆಗೆ ಸುಪ್ರೀಂ ಮೊರೆ ಹೋದ ಗೋವಾ

ಬೆಂಗಳೂರು,ಜ.16- ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರಿಷ್ಕೃತ ಡಿಪಿಆರ್‍ಗೆ ಕೇಂದ್ರ ಅನುಮೋದನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯೋಜನೆ ತಡೆಯುವ ಸಲುವಾಗಿ ಗೋವಾ ಸರ್ಕಾರ ಸುಪ್ರೀಂಕೋರ್ಟ್ ಮೊರೆಹೋಗಿದೆ. ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯುವುದಾಗಿ ಮುಖ್ಯಮಂತ್ರಿಗಳು ಘೋಷಿಸಿರುವ ಹಿನ್ನೆಲೆಯಲ್ಲಿ, ಈ ಯೋಜನೆ ತಡೆಯಲು ಗೋವಾ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ವನ್ಯಜೀವಿ (ರಕ್ಷಣೆ) ಕಾಯ್ದೆ 1972ರ ಸೆಕ್ಷನ್ 29ರ ಪ್ರಕಾರ ವನ್ಯಜೀವಿ ಅಭಯಾರಣ್ಯಗಳಲ್ಲಿ ನೀರು ಹರಿಸುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂಬ […]