ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಪ್ರಯಾಣಿಕ

ಬೆಂಗಳೂರು, ಸೆ.1- ಬ್ಯಾಂಕಾಕ್ನಿಂದ ಕ್ಯಾಪ್ಸುಲ್ ಮಾದರಿಯಲ್ಲಿ ಚಿನ್ನದ ಗಟ್ಟಿಯನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಕಳ್ಳಸಾಗಣೆ ಮಾಡಿದ ವ್ಯಕ್ತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಪ್ರಯಾಣಿಕನ ಸೋಗಿನಲ್ಲಿ 22 ಲಕ್ಷ ಮೌಲ್ಯದ 442 ಗ್ರಾಂಚಿನ್ನವನ್ನು ಅಡಗಿಸಿಟ್ಟುಕೊಂಡು ಬ್ಯಾಂಕಾಕ್ನಿಂದ ವಿಮಾನದಲ್ಲಿ ಆ.30ರಂದು ಬೆಂಗಳೂರಿಗೆ ಬಂದಿದ್ದಾನೆ.ಈತನನ್ನು ವೈಮಾನಿಕ ಗುಪ್ತಚರ ದಳದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡಿಕೊಂಡು ಬಂದಿರುವುದು ಕಂಡುಬಂದಿದೆ. ತಕ್ಷಣ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಗುದನಾಳದಲ್ಲಿ ಕ್ಯಾಪ್ಸುಲ್ ಮಾದರಿಯಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಣೆ […]