“ಲಸಿಕೆ ಕುರಿತು ವಿಪಕ್ಷಗಳ ಟೀಕೆಗಳಿಗೆ ಪ್ರಧಾನಿ ಮೋದಿ ತಕ್ಕ ಉತ್ತರ ನೀಡಿದ್ದಾರೆ”

ಬೆಂಗಳೂರು. ಜ.5; ಕೋವಿಡ್ ಲಸಿಕೆ ನೀಡಿಕೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿದ್ದು, ಈ ಮೂಲಕ ಲಸಿಕೆ ನೀಡಿಕೆ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಅರಬಿಂದೋ ಪದವಿಪೂರ್ವ ಕಾಲೇಜಿನಲ್ಲಿಂದು 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 135 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಂಥಹ […]