ಆರ್.ಅಶೋಕ್ ಬದಲಿಗೆ ಮಂಡ್ಯ ಉಸ್ತುವಾರಿ ಹೊಣೆ ಗೋಪಾಲಯ್ಯ ಹೆಗಲಿಗೆ..?

ಬೆಂಗಳೂರು,ಫೆ.9- ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರಿಗೆ ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗುತ್ತಿರುವುದರಿಂದ ಅಬಕಾರಿ ಸಚಿವ ಗೋಪಾಲಯ್ಯ ಅವರಿಗೆ ಉಸ್ತುವಾರಿ ನೀಡಲು ಚಿಂತನೆ ನಡೆದಿದೆ. ಜಿಲ್ಲೆಯಲ್ಲಿ ಹೊತ್ತಿಕೊಂಡಿರುವ ಅಸಮಾಧಾನ ಈ ಕ್ಷಣದವರೆಗೂ ಶಮನಗೊಂಡಿಲ್ಲ. ಪಕ್ಷದ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಅಶೋಕ್ ಅವರನ್ನು ಬದಲಾಯಿಸಲು ಪಕ್ಷದಲ್ಲಿ ಸಮಾಲೋಚಿಸಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಗೋಪಾಲಯ್ಯ ಅವರನ್ನು ಮಂಡ್ಯ ಜಿಲ್ಲೆಗೆ ನಿಯೋಜಿಸಿ ಅಶೋಕ್ ಅವರಿಗೆ ಬೇರೊಂದು ಜವಾಬ್ದಾರಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಮಾನಿಸಿದ್ದಾರೆ […]

ವಿದ್ಯಾರ್ಹತೆಗೆ ತಕ್ಕ ಉದ್ಯೋಗ : ಗೋಪಾಲಯ್ಯ ಭರವಸೆ

ಬೆಂಗಳೂರು,ಫೆ.5- ಮಹಾಲಕ್ಷ್ಮಿಲೇಔಟ್‍ನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ವಿದ್ಯಾರ್ಹತೆಗೆ ತಕ್ಕ ಉದ್ಯೋಗ ನೀಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಶ್ರೀಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬೋವಿಪಾಳ್ಯದ ಬಿಜಿಎಸ್ ಕಾಲೇಜು ಕ್ಯಾಂಪಸ್ ನಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುತೂಹಲ ಕೆರಳಿಸಿದ ಬೊಮ್ಮಾಯಿ ಹಾಗೂ […]

ಮಂಡ್ಯ ಉಸ್ತುವಾರಿ ಬದಲಾಯಿಸಿದ್ದೇಕೆ? ಬಿಜೆಪಿಯಲ್ಲೇ ಗಂಭೀರ ಚರ್ಚೆ

ಬೆಂಗಳೂರು,ಜ.27- ಕಾಂಗ್ರೆಸ್ ಮತ್ತು ಜೆಡಿಎಸ್‍ನ ಭದ್ರಕೋಟೆ ಎನಿಸಿದ ಸಕ್ಕರೆನಾಡು ಮಂಡ್ಯದಲ್ಲಿ ಬಿಜೆಪಿಯನ್ನು ಯಶಸ್ವಿಯಾಗಿ ಸಂಘಟಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಬದಲಾಯಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಗೋಪಾಲಯ್ಯ ಅವರನ್ನು ಬದಲಾಯಿಸಿ ಮಂಡ್ಯ ಉಸ್ತುವಾರಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ನೀಡಿರುವುದಕ್ಕೆ ಸ್ವಪಕ್ಷದವರೇ ಬಹಿರಂಗವಾಗಿ ವಿರೋಧಿಸಿರುವುದು ಮಂಡ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರವಾಗಿದೆ. ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಅವರು ಆರ್. ಅಶೋಕ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಿಯೋಜನೆ ಮಾಡಿರುವುದಕ್ಕೆ ಬಹಿರಂಗವಾಗಿಯೇ ವಿರೋಧಿಸಿ ಗೋ ಬ್ಯಾಕ್ […]

ಹೊಸ ಶಿಕ್ಷಣ ನೀತಿಗೆ ತಕ್ಕಂತೆ ಸರ್ಕಾರಿ ಶಾಲೆಗಳಿಗೆ ಸೌಲಭ್ಯ : ಸಚಿವ ಗೋಪಾಲಯ್ಯ

ಬೆಂಗಳೂರು,ಜು.31- ಬರುವ ವರ್ಷದಿಂದ ಪ್ರಾಥಮಿಕ ಹಂತದಿಂದಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದ್ದು, ಅದಕ್ಕೆ ತಕ್ಕಂತೆ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಹಲವು ಕಡೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ದೆಹಲಿ ಮಾದರಿಯ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು. ಈ ಶಾಲೆಗಳಲ್ಲಿ ಆಧುನಿಕತೆಗೆ ತಕ್ಕಂತೆ […]