ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು, ಫೆ.18- ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣ ಕಡಿಮೆಯಾಗಿರುವುದರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಎಲ್ಲಾ ಅಧಿಕಾರಿ, ಸಿಬ್ಬಂದಿ ಬಯೋಮೆಟ್ರಿಕ್ ಯಂತ್ರದಲ್ಲಿ ತಮ್ಮ ಹಾಜರಾತಿ ದಾಖಲಿಸುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಇಂದಿನಿಂದ ಜಾರಿಗೆ ಬರುವಂತೆ ಪುನರಾರಂಭಿಸಲಾಗಿದೆ. ಸಚಿವಾಲಯ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಅಕಾರಿ, ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸೂಚಿಸಲಾಗಿದೆ. ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ […]