ಮನೆ ಬಾಗಿಲಿಗೆ ತಲುಪಲಿವೆ ಸರ್ಕಾರದ ಯೋಜನೆಗಳು : ಸಚಿವ ಆರ್.ಅಶೋಕ್

ದಾವಣಗೆರೆ ಮಾ.1- ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತ ಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರ ನಮ್ಮದಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಹೊನ್ನಾಳಿ ಪಟ್ಟಣದ ಅಂಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ನೂತನ ಕಂದಾಯ ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಂಜೀವಿನಿ ಯೋಜನೆ ಅಡಿಯಲ್ಲಿ […]