ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ

ಬೆಂಗಳೂರು, ಜ.26- ಮುಂದಿನ ಎರಡು ವರ್ಷಗಳಲ್ಲಿ ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ 100 ಐಲೋಡ್ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಮಾಣಿಕ ಷಾ ಪೆರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನಾರೋಗ್ಯ, ಆರೋಗ್ಯ ಕರ್ನಾಟಕ ಕಾರ್ಡ್‍ಗಳಿಗೆ 1.22 ಕೋಟಿ ಫಲಾನುಭವಿಗಳನ್ನು ನೊಂದಾಯಿಸಿದ್ದು, ಬಿಪಿಎಲ್ ಕುಟುಂಬಗಳಿಗೆ 5 […]