ಸರ್ಕಾರಕ್ಕೆ ಕಿವಿ ಹಿಂಡುವಂತೆ ರಾಜ್ಯಪಾಲರಿಗೆ ಎಚ್‍ಡಿಕೆ ಆಗ್ರಹ
ಬೆಂಗಳೂರು, ಫೆ.23- ರಾಜ್ಯದಲ್ಲಿ ಶಾಂತಿ, ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರ್ಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ಆಗ್ರಹಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಸಮಯವನ್ನು ಕೇಳಿದ್ದು, ಈ ಸಂಬಂಧ ದೂರು ನೀಡಲಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ […]
ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ
ಬೆಂಗಳೂರು,ಫೆ.14- ರಾಜಧಾನಿ ಬೆಂಗಳೂರಿನಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕಾಗಿ 8 ಸಾವಿರದ 15 ಕೋಟಿ ರೂ. ವೆಚ್ಚದ ಅನುಮೋದನೆ ನೀಡಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದರು. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನಿಯಮವನ್ನು ವ್ಯವಸ್ಥಿತ ಮತ್ತು ಪಾರದರ್ಶಕವಾಗಿ ರಚಿಸಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು. ನಗರದಲ್ಲಿ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಿಕೊಡಲು ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ […]
ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣದ ಹೈಲೈಟ್ಸ್
ಬೆಂಗಳೂರು,ಜ.26-ಪ್ರಸ್ತುತ ಕೋವಿಡ್ 3ನೇ ಅಲೆ ಎದುರಾಗಿದ್ದು, ಎಲ್ಲರ ಆರೋಗ್ಯದ ಹಿತಕ್ಕಾಗಿ ಪ್ರತಿಯೊಬ್ಬರೂ ಭೌತಿಕ ಅಂತರ, ಮುಖ ಗವಸು ಹಾಗೂ ಸಾನಿಟೈಸರ್ ಬಳಕೆಯ(ಎಸ್‍ಎಂಎಸ್) ಎಂಬ ಮೂರು ಮಂತ್ರಗಳನ್ನು ಪಾಲಿಸಬೇಕೆಂದು ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ನಮಗೆ ಎದುರಾಗಿರುವ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು. ಯಾವುದೇ ರೀತಿಯಲ್ಲೂ ಅಲಕ್ಷ್ಯ ಮಾಡುವುದು ಸರಿಯಲ್ಲ. ನಿಮ್ಮ ಹಾಗೂ ಬೇರೊಬ್ಬರ ಆರೋಗ್ಯದ ದೃಷ್ಟಿಯಿಂದ ಮೂರು ಮಂತ್ರಗಳನ್ನು ನಿರಂತರವಾಗಿ ಪಾಲಿಸುವ ಮೂಲಕ ಕೋವಿಡ್ ವಿರುದ್ದ ಹೋರಾಟ ಮಾಡಬೇಕೆಂದು ಮನವಿ ಮಾಡಿದರು. […]