ಹೊಗೆನಕಲ್ ಯೋಜನೆ ಜಾರಿಗೆ ಕರ್ನಾಟಕ ವಿರೋಧ

ಬೆಂಗಳೂರು, ಡಿ.21- ಹೊಗೆನಕಲ್ ಯೋಜನೆಯ ಎರಡನೆ ಹಂತವನ್ನು ಕೈಗೆತ್ತಿಕೊಳ್ಳುವುದಾಗಿ ತಮಿಳುನಾಡು ಮುಖ್ಯಮಂತ್ರಿ ಘೋಷಿಸಿದ್ದು, ಈ ಯೋಜನೆಗೆ ನಮ್ಮ ತೀವ್ರ ವಿರೋಧವಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4600 ಕೋಟಿ ರೂ. ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಾಗಿ ಘೋಷಿಸಿರುವುದು ಗಮನಕ್ಕೆ ಬಂದಿದೆ. ಈ ಯೋಜನೆಯ ವಿವರವನ್ನು ನ್ಯಾಯಾಧೀಕರಣ ಮತ್ತು ಸುಪ್ರೀಂಕೊರ್ಟ್ ಮುಂದೆ ಪ್ರಸ್ತುತ ಪಡಿಸದಿರುವ ತಮಿಳುನಾಡಿನ ಯಾವುದೇ ಯೋಜನೆಯನ್ನು ಕರ್ನಾಟಕ ಸರ್ಕಾರ ವಿರೋಧಿಸುತ್ತದೆ ಎಂದರು. ಕಾವೇರಿ ಕಣಿವೆಯಲ್ಲಿ ನ್ಯಾಯಾೀಕರಣ […]