ಗೋವಿಂದರಾಜನಗರ ಕ್ಷೇತ್ರದಲ್ಲಿ ಮಾರಾಮಾರಿ : 3 ಎಫ್‍ಐಆರ್ ದಾಖಲು

ಬೆಂಗಳೂರು,ಮಾ.18- ಫ್ಲೆಕ್ಸ್ ಹಾಕುವ ವಿಚಾರವಾಗಿ ವಿಜಯನಗರದ ಎಂ.ಸಿ.ಲೇಔಟ್‍ನ ಬಿಜಿಎಸ್ ಆಟದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಿನ್ನೆ ಸಂಜೆ ಮಾರಾಮಾರಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‍ಐಆರ್‍ಗಳು ದಾಖಲಾಗಿವೆ. ಎಂಟು ಮಂದಿ ಗಾಯ: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ. ನಾಲ್ಕು ತಂಡ ರಚನೆ: ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ಮೂರು ಪ್ರಕರಣಗಳು ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪಶ್ಚಿಮ ವಿಭಾಗದ […]