ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರವೇ ಕಾರಣ: ಡಿಕೆಶಿ ಆಕ್ರೋಶ

ಬೆಂಗಳೂರು, ಜು.28- ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲ. ಸರ್ಕಾರವೇ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡಿದ್ದು, ಆ ಮೂಲಕ ಪರಿಸ್ಥಿತಿ ಹದಗೆಡಲು ಕಾರಣವಾಗಿದೆ. ಅಹಿತಕರ ಘಟನೆಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಹಳ ಅನ್ಯಾಯ. ನಾವು ಇದನ್ನು ಖಂಡಿಸುತ್ತೇವೆ ಎಂದಿದ್ದಾರೆ. […]