ಸ್ವರ್ಣ ಗೌರಿ ಹಬ್ಬದ ಮಹತ್ವ ಗೊತ್ತೇ..?

ಹಿಂದೂ ಸಂಪ್ರಾಯದಲ್ಲಿ ಪ್ರತಿಯೊಂದು ಹಬ್ಬವೂ ಪೌರಾಣಿಕ ಹಿನ್ನೆಲೆ ಹಾಗೂ ಧಾರ್ಮಿಕ ಸಂಪ್ರದಾಯ ಹೊಂದಿವೆ. ಅಂತಹ ಹಬ್ಬಗಳಲ್ಲಿ ಗೌರಿ – ಗಣೇಶ ಹಬ್ಬ ಅತ್ಯಂತ ಪ್ರಮುಖವಾದುದು. ಭಾದ್ರಪದ ಮಾಸದಲ್ಲಿ ಬರುವ ಮೊದಲ ಹಬ್ಬವೇ ಗೌರಿಹಬ್ಬ. ಗೌರಿ ಹಬ್ಬಕ್ಕೆ ವಿಶೇಷ ಸ್ಥಾನವಿದ್ದು, ಗೌರಿ ಭೂಮಿಗೆ ಬರುತ್ತಾಳೆ ಎಂಬ ಪ್ರತೀತಿಯಿದೆ. ಗೌರಿ ದೇವಿ ಪ್ರಕೃತಿಯ ಸ್ವರೂಪ. ಪಾರ್ವತಿ ದೇವಿಯ ಅಪರಾವತಾರ. ಕುಟುಂಬದ ಸಂತೋಷ, ಸಮೃದ್ಧಿ ಹೆಚ್ಚಿಸಲಿ, ನಮಗೆ ಶಕ್ತಿನೀಡಲಿ ಎಂದು ಶ್ರದ್ಧೆ-ಭಕ್ತಿಯಿಂದ ಗೌರಿಯನ್ನು ಪೂಜಿಸಲಾಗುವುದು. ಗೌರಿ ಹಬ್ಬವನ್ನು ಸುವರ್ಣ ಗೌರಿ ಹಬ್ಬವೆಂದು […]