ಗ್ರಾಮ ಒನ್ ಸೇವೆಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು, ಜ.26- ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಹಲವು ಸೇವೆಗಳನ್ನು ಒಂದೇ ಸೂರಿನಡಿ ನಗರ ಪ್ರದೇಶಗಳಲ್ಲಿ ಒದಗಿಸಲಾಗುತ್ತಿದೆ. ಅದೇ ರೀತಿ ಗ್ರಾಮೀಣ ಭಾಗದಲ್ಲೂ ಒದಗಿಸುವ ಉದ್ದೇಶದಿಂದ ಗ್ರಾಮ ಒನ್ ಜಾರಿಗೆ ತರಲಾಗಿದೆ. […]