ಸ್ವಕ್ಷೇತ್ರದಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಬೆಂಗಳೂರು,ಡಿ.10- ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಡಿಸೆಂಬರ್ 17ರಂದು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಗ್ರಾಮ ವಾಸ್ತವ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ಗ್ರಾಮವಾಸ್ತವ್ಯದಲ್ಲಿ ಭಾಗಿಯಾಗುತ್ತಿದ್ದು, ಈ ಮೂಲಕ ತಮ್ಮ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಅನುಸರಿಸಲಿದ್ದಾರೆ. ಗ್ರಾಮ ವಾಸ್ತವ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಉಪಯೋಗವಾಗುತ್ತಿರುವುದರಿಂದ ಜನಪ್ರಿಯವಾಗಿದೆ. ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಅಧಿಕಾರಿಗಳು ಪ್ರತಿ ಮನೆಗೆ […]