ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಜಾಮೀನು ಮಂಜೂರು

ಮುಂಬೈ,ಡಿ.12- ಭ್ರಷ್ಟಾಚಾರ ಆರೋಪಕ್ಕಾಗಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ದೇಶ್‍ಮುಖ್ ಜೈಲಿನಿಂದ ಬಿಡುಗಡೆಯಾಗಿಲ್ಲ. ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ಕಾಲಾವಕಾಶ ನೀಡಿ ಹೈಕೋರ್ಟ್‍ಜಾಮೀನನ್ನು 10 ದಿನಗಳ ಕಾಲ ತಟಸ್ಥವಾಗಿರಿಸಿದೆ. ಎನ್.ಎಸ್.ಕಾರ್ನಿಕ್ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿಯ ಪರ-ವಿರೋಧ ವಾದ ಆಲಿಸಿದ ಬಳಿಕ ತೀರ್ಪು ನೀಡಿದೆ. 74 ವರ್ಷದ ಅನಿಲ್ ದೇಶ್‍ಮುಖ್ ಅವರ ಜಾಮೀನು ಅರ್ಜಿಯನ್ನು ಕಳೆದ ತಿಂಗಳು ಸಿಬಿಐ ವಿಶೇಷ ನ್ಯಾಯಾಲಯ […]