ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಆತಂಕ ಹುಟ್ಟಿಸಿದ ಗುಜರಾತ್ ಗೆಲುವು..!

ಬೆಂಗಳೂರು,ಡಿ.8- ಪ್ರಧಾನಿ ನರೇಂದ್ರಮೋದಿ ತವರೂರು ಗುಜರಾತ್‍ನಲ್ಲಿ ಆಡಳಿತ ವಿರೋಧಿಯನ್ನು ಮೆಟ್ಟಿ ಸತತ 7ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ರಾಜ್ಯದ ಕೆಲವು ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಗುಜರಾತ್‍ನಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ಸಚಿವರು, ಶಾಸಕರು ಸೇರಿದಂತೆ ಸುಮಾರು 35ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಆಂತರಿಕ ಸಮೀಕ್ಷೆಯಲ್ಲಿ ಸೋಲಾಗುತ್ತದೆ ಎಂದು ಅರಿತಿದ್ದ ಬಿಜೆಪಿ ನಿರ್ದಾಕ್ಷಿಣ್ಯವಾಗಿ ಟಿಕೆಟ್ ನಿರಾಕರಿಸಿ ಹೊಸ ಮುಖಗಳಿಗೆ ಮಣೆ ಹಾಕಿತ್ತು. ಇದೀಗ ಪ್ರಕಟಗೊಂಡ ಫಲಿತಾಂಶದಲ್ಲಿ ಆಡಳಿತ […]