ಯುವತಿಗೆ ತಂದೆ ಹಾಗೂ ಸಹೋದರನಿಂದಲೇ ಲೈಂಗಿಕ ಕಿರುಕುಳ

ಗುರುಗ್ರಾಮ,ಫೆ.21- ತಂದೆ ಹಾಗೂ ಸಹೋದರನೇ 17 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಯುವತಿ ನೀಡಿರುವ ದೂರಿನ ಆಧಾರದ ಮೇಲೆ ಲೈಂಗಿಕ ಕಿರುಕುಳ ನೀಡಿರುವ ತಂದೆ ಹಾಗೂ ಸಹೋದರನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನನ್ನ ತಂದೆ ಹಾಗೂ ಸಹೋದರ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ದೂರಿನಲ್ಲಿ ಹೇಳಿಕೊಂಡಿದ್ದಾರೆ. ತನ್ನ ತಂದೆ ಹಾಗೂ ಸಹೋದರನ ಕೃತ್ಯದಿಂದ […]
ಟ್ರಕ್ ಕಾರಿಗೆ ಡಿಕ್ಕಿ: ನಾಲ್ವರ ದುರ್ಮರಣ
ಹರಿಯಾಣ,ಆ.16- ಟ್ರಕ್‍ವೊಂದು ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಗುರುಗ್ರಾಮ್‍ನಲ್ಲಿ ನಡೆದಿದೆ. ಉದಯಪುರದಿಂದ ಪ್ರವಾಸ ಮುಗಿಸಿಕೊಂಡು ತಮ್ಮೂರಿಗೆ ವಾಪಸ್ಸಾಗುತ್ತಿದ್ದಾಗ ನಸುಕಿನ ಜಾವ 1.40ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಹಿಳೆ ಹಾಗೂ ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಗುರುಗ್ರಾಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.