ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹಠಾತ್ ನಿಧನ

ಬೆಂಗಳೂರು,ಆ.22- ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ.ಎಚ್.ಬಿ(47) ಇಂದು ಹಠಾತ್ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಜಿಮ್‍ನಲ್ಲಿ ಕಸರತ್ತು ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನದವರೆಗೂ ಅನ್ನಪೂರ್ಣೇಶ್ವರಿನಗರದ ನಿವಾಸದಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಾಳೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಮೃತದೇಹದ ಅಂತ್ಯಕ್ರಿಯೆ ನೆರವೇರಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ. ಗುರುಲಿಂಗಸ್ವಾಮಿ ಅವರು […]