15 ಮನೆಗಳು ಬೆಂಕಿಗೆ ಆಹುತಿ

ಜಮ್ಮು, ಅ.28- ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ 15 ಮನೆಗಳು ಸುಟ್ಟು ಭಸ್ಮವಾಗಿವೆ. ಮಧ್ಯರಾತ್ರಿ ಪದ್ದರ್ ತಹಸಿಲ್‍ನ ಚಾಗ್-ಗಾಂಧಾರಿ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯರೊಂದಿಗೆ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು. ಬೆಂಕಿ ನಂದಿಸುವ ವೇಳೆಗೆ 15 ವಸತಿ ಕಟ್ಟಡಗಳು ಸುಟ್ಟು ಕರಕಲಾಗಿವೆ ಮತ್ತು 23 ಕುಟುಂಬಗಳು ಸೂರು ಕಳೆದುಕೊಂಡಿದ್ದಾರೆ ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ […]