ದಾಖಲೆ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ

ನವದೆಹಲಿ,ನ.12- ಮೊದಲ ಬಾರಿಯ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಹೊಸ ದಾಖಲೆ ಸೃಷ್ಟಿ ಮಾಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.ಇಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಟ್ವಿಟ್ ಮೂಲಕ ಹೊಸ ಮತದಾರರಿಗೆ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನ ಮಂತ್ರಿಗಳು ಉತ್ತೇಜಿಸಿದ್ದಾರೆ. ದೇವಭೂಮಿಯ ಎಲ್ಲಾ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಬೇಕು ಎಂದು ನಾನು ವಿನಂತಿಸಿಕೊಳ್ಳುತ್ತೇನೆ ಎಂದು ಮೋದಿ ಹಿಂದಿಯಲ್ಲಿ […]