ಗೋಮಾಂಸ ರಫ್ತು ಮಾಡುವ ಕಂಪನಿಗಳನ್ನೂ ನಿಷೇಧಿಸಲಿ : ನಸೀರ್ ಅಹ್ಮದ್

ಬೆಳಗಾವಿ,ಡಿ.23- ಹೊರದೇಶಗಳಿಗೆ ಗೋವಿನ ಮಾಂಸ ರಫ್ತು ಮಾಡುವ ಕಂಪನಿಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವುದನ್ನು ನಿಷೇಧಿಸಲಿ ಎಂದು ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಹಾರ ಪದಾರ್ಥಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವುದನ್ನು ನಿಷೇಧಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯರೊಬ್ಬರು ಖಾಸಗಿ ವಿಧೇಯಕ ಮಂಡನೆ ಮಾಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಆದರೆ, ನಮ್ಮ ದೇಶದಿಂದ ಹೊರ ದೇಶಗಳಿಗೆ ಗೋ ಮಾಂಸ ರಫ್ತು ಮಾಡಲಾಗುತ್ತಿದ್ದು, ಅಂತಹ ಕಂಪನಿಗಳಿಗೆ ಹಲಾಲ್ ಪ್ರಮಾಣ ಪತ್ರ ನೀಡುವುದನ್ನು […]