ಮಂಗಳೂರು ಸ್ಪೋಟದ ರುವಾರಿ ಶಾರೀಕ್‍ಗೆ ಐಸಿಸ್ ಲಿಂಕ್

ಬೆಂಗಳೂರು,ನ.21- ಮಂಗಳೂರಿನ ನಾಗೋರಿಯಲ್ಲಿ ಸಂಭವಿಸಿದ ಆಟೋದಲ್ಲಿ ಸ್ಪೋಟ ಪ್ರಕರಣದ ಆರೋಪಿ ಶಾರೀಕ್ ಅಂತಾರಾಷ್ಟ್ರೀಯ ಉಗ್ರ ಸಂಘಟನೆಗಳಿಂದ ಪ್ರಭಾವಿತನಾಗಿದ್ದ ಎಂದು ಸ್ಪಷ್ಟಪಡಿಸಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‍ಕುಮಾರ್, ಕಡಿಮೆ ತೀವ್ರತೆಯ ಸ್ಪೋಟದಿಂದ ಭಾರೀ ದುರಂತವೊಂದು ತಪ್ಪಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನ.19ರಂದು ಮಂಗಳೂರಿನ ನಾಗೋರಿ ಪ್ರದೇಶದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಕುರಿತಂತೆ ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಸುದೀರ್ಘ ವಿವರಣೆ ನೀಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಈವರೆಗೂ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ, ಮೈಸೂರಿನ ಇಬ್ಬರು, […]