ಧಾರವಾಡ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ

ಧಾರವಾಡ,ಫೆ.1-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆಗಾಗಿ ಇಂದು ಸಂಸತ್ತಿಗೆ ಆಗಮಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮೆರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದಿದ್ದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಫ್ಟ್ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಲ್ಹಾದ ಜೋಶಿ ಅವರು ನವಲಗುಂದ ಕಸೂತಿ […]