ಸರ್ಕಾರದ ಆಡಳಿತ ರೌಡಿಗಳ ಹಿಡಿತದಲ್ಲಿದೆ : ಪ್ರಿಯಾಂಕ್ ಖರ್ಗೆ

ಕಲಬುರಗಿ,ಜ.6- ರಾಜ್ಯದಲ್ಲಿ ಬಿಜೆಪಿ ಪಕ್ಷವಾಗಲಿ, ಮುಖ್ಯಮಂತ್ರಿಯವರಾಗಲಿ ಸರ್ಕಾರ ನಡೆಸುತ್ತಿಲ್ಲ. ಬದಲಾಗಿ ರೌಡಿಗಳು ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ದೇಶದಲ್ಲಷ್ಟೆ ಅಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಭ್ರಷ್ಟ ಸರ್ಕಾರ ಎಂಬ ಅಪಕೀರ್ತಿ ಬಂದಿದೆ. ಬಿಜೆಪಿ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ, ಬ್ರೋಕರ್ಸ್ ಜನತಾ ಪಕ್ಷವಾಗಿದೆ ಎಂದು ಕಿಡಿಕಾರಿದರು. ಪವಿತ್ರವಾದ ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಲಾಗಿದೆ. ಬಿಜೆಪಿಯವರ ಭ್ರಷ್ಟಚಾರದಿಂದ ವಿಧಾನಸೌಧ ತನ್ನ ಪಾವಿತ್ರ್ಯವನ್ನು ಕಳೆದುಕೊಂಡು, ದೊಡ್ಡ ಶಾಪಿಂಗ್ ಮಾಲ್ ಆಗಿದೆ. […]