ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಳ್ಳದಿದ್ದರೆ 4 ಪಟ್ಟುದಂಡ

ಬೆಳಗಾವಿ,ಡಿ.29-ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಡ ಮಾಲೀಕರು ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ ಮಾಡಿಕೊಳ್ಳದಿದ್ದರೆ, ಮೂರು ತಿಂಗಳ ನಂತರ ನಾಲ್ಕು ರಷ್ಟು ಪ್ರಮಾಣದಲ್ಲಿ ದಂಡ ಕಟ್ಟಡಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಜಲಮಂಡಳಿ ನಿಯದ ಅನ್ವಯ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳದೆ ಇರುವ ಕಟ್ಟಡಗಳಿಗೆ ಅದರಲ್ಲೂ ವಾಸದ ಮನೆಗಳಿಗೆ ಮೊದಲ […]