ಕನ್ನಡ ಮನಸ್ಸುಗಳೊಂದಿಗೆ ಎಚ್‍ಡಿಕೆ ಮುಕ್ತ ಮಾತುಕತೆ
ಬೆಂಗಳೂರು, ಫೆ.8- ನಾಡಿನ ನೆಲ, ಜಲ ಮತ್ತು ಭಾಷೆ ವಿಚಾರದಲ್ಲಿ ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾಳೆ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕನ್ನಡ ಮನಸ್ಸುಗಳ ಮುಕ್ತ ಮಾತುಕತೆ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಪುರಭವನದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಿದ್ದಾರೆ. ನಾಡು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕನ್ನಡಪರ ಸಂಘಟನೆಗಳ ಮುಖಂಡರಿಂದ ಅಭಿಪ್ರಾಯವನ್ನು ಕುಮಾರಸ್ವಾಮಿ ಸಂಗ್ರಹಿಸಲಿದ್ದಾರೆ. ಮುಂಬರುವ 2023ರ ವಿಧಾನಸಭೆ ಚುನಾವಣೆಗೆ […]