ಸರ್ಕಾರಕ್ಕೆ ಕಿವಿ ಹಿಂಡುವಂತೆ ರಾಜ್ಯಪಾಲರಿಗೆ ಎಚ್‍ಡಿಕೆ ಆಗ್ರಹ

ಬೆಂಗಳೂರು, ಫೆ.23- ರಾಜ್ಯದಲ್ಲಿ ಶಾಂತಿ, ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರ್ಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ಆಗ್ರಹಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಸಮಯವನ್ನು ಕೇಳಿದ್ದು, ಈ ಸಂಬಂಧ ದೂರು ನೀಡಲಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ […]

ಹರ್ಷ ಹತ್ಯೆ ಟ್ರೈಲರ್ ಅಷ್ಟೇ ಅನಿಸುತ್ತಿದೆ, ಮುಂದಿದೆ ಪಿಚ್ಚರ್ : ಆತಂಕ ವ್ಯಕ್ತಪಡಿಸಿದ ಹೆಚ್ಡಿಕೆ

ಬೆಂಗಳೂರು,ಫೆ.21- ರಾಜ್ಯದ ಪ್ರಮುಖ ವಿಚಾರಗಳ ಚರ್ಚೆಗೆ ಸದನದಲ್ಲಿ ಅವಕಾಶ ಸಿಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಸುಗಮವಾಗಿ ನಡೆಯಬೇಕು ಎಂದು ಒತ್ತಾಯಿಸಿ ನಮ್ಮ ಶಾಸಕರು ಮಹಾತ್ಮಗಾಂ ಪ್ರತಿಮೆ ಬಳಿ ಧರಣಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಇವತ್ತು ಅಥವಾ ನಾಳೆ ಮುಂದಿನ ಬಜೆಟ್ ಅಧಿವೇಶನದವರೆಗೂ ಸದನ ಮುಂದೂಡುವ ಸಾಧ್ಯತೆಯಿದೆ.ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ತಂದರು. ಆ ಸಂದರ್ಭದಲ್ಲೂ ಯಾವುದೇ ಸಮಸ್ಯೆ ಚರ್ಚೆಯಾಗದೆ ಅವೇಶನ […]