ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ ನೀಟ್ : ಹೆಚ್ಡಿಕೆ

ಬೆಂಗಳೂರು, ಮಾ.2-ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್, ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಟೀಕಿಸಿದ್ದಾರೆ. ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು […]