ಮಳೆ ನಿಂತ ಮೇಲೆ ಪಂಚರತ್ನ ರಥಯಾತ್ರೆ ಆರಂಭ : ಹೆಚ್ಡಿಕೆ

ಬೆಂಗಳೂರು, ಸೆ.1-ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿತೃಪಕ್ಷ, ದಸರಾ ಇದೆ. ಒಮ್ಮೆ ಪ್ರಾರಂಭ ಮಾಡಿದರೆ 120-130 ಕ್ಷೇತ್ರದಲ್ಲಿ ಮಾಡುತ್ತೇವೆ. ಸರಿಯಾದ ಸಮಯ ನೋಡಿಕೊಂಡು ಪಂಚರತ್ನ ಪ್ರಾರಂಭಿಸುವುದಾಗಿ ತಿಳಿಸಿದರು.ಪ್ರವಾಸದ ವೇಳೆ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಅಲ್ಲದೆ, ಗ್ರಾಮ ವಾಸ್ತವ್ಯದಲ್ಲಿ 14-15 ಕಾರ್ಯಕ್ರಮಗಳು ಇರಲಿವೆ ಎಂದರು. ರಾಮನಗರ ಮಳೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಗಳು […]