ಜನರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದಂತಿದೆ ಈ ಬಜೆಟ್ : ಹೆಚ್ಡಿಕೆ
ಬೆಂಗಳೂರು: ಸಾಮಾನ್ಯ ಜನರ ಪಾಲಿಗೆ ಭರವಸೆ ಆಶಾಕಿರಣವಾಗಬೇಕಿದ್ದ ಕೇಂದ್ರ ಬಜೆಟ್ ನಲ್ಲಿ ಅಂಥ ಯಾವುದೇ ಅಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.“ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಈ ಬಜೆಟ್” ಎಂದು ಪ್ರಸಕ್ತ ಸಾಲಿನ ಕೇಂದ್ರ ಮುಂಗಡ ಪತ್ರದ ಬಗ್ಗೆ ಅವರು ಒಂದು ಸಾಲಿನಲ್ಲಿ ವ್ಯಾಖ್ಯಾನ ಮಾಡಿದರು. ಬಜೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು; ಸಾಮಾನ್ಯನ ಬದುಕಿನ ಬಗ್ಗೆ ಬಜೆಟ್ ಯೋಚನೆಯನ್ನೇ ಮಾಡಿಲ್ಲ. ಕೋವಿಡ್, […]