“ಬೇಟಿ ಬಚಾವೋ ಬೇಟಿ ಪಡಾವೋ ಬದಲಿಗೆ ಈಗ ಬೇಟಿ ಹಠಾವೋ ಮಾಡಲಾಗುತ್ತಿದೆ” : ಹೆಚ್ಡಿಕೆ ಆಕ್ರೋಶ
ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ ” ಎಂದರು. […]