ರಾಜ್ಯಗಳ ಕೋವಿಡ್ ಪೂರ್ವಸಿದ್ಧತೆ ಕುರಿತು ಕೇಂದ್ರ ಸಚಿವರಿಂದ ಪರಿಶೀಲನೆ

ನವದೆಹಲಿ,ಡಿ.23- ಕೋವಿಡ್ ನಿಭಾಯಿಸಲು ಕೈಗೊಳ್ಳಲಾಗಿರುವ ಪೂರ್ವ ಸಿದ್ಧತೆಗಳ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸೂಕ್ ಮಾಂಡವೀಯ ಇಂದು ದೇಶದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರ ಜೊತೆ ವರ್ಚುವಲ್ ಸಭೆ ನಡೆಸಲಿದ್ದಾರೆ. ಚೀನಾ ಹಾಗೂ ಇತರ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕಳೆದ ಮೂರು ದಿನಗಳಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ನಾಳೆಯಿಂದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್ ಮಾದರಿಗಳ ಸಂಗ್ರಹವನ್ನು ಆರಂಭಿಸಲಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ […]