ಹೃದಯ ಕಾಯಿಲೆಗೆ ಹೆದರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು, ಡಿ.21- ಹೃದಯ ಸಂಬಂಧಿ ಕಾಯಿಲೆಯಿಂದ ಖಿನ್ನತೆಗೊಳಗಾಗಿದ್ದ ಸಾಫ್ಟ್ ವೇರ್ ಎಂಜಿನಿಯರ್‍ರೊಬ್ಬರು ತಮ್ಮ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಿವಾಸಿ ವಿಜಯಕುಮಾರ್(51) ಆತ್ಮಹತ್ಯೆ ಮಾಡಿಕೊಂಡಿರುವ ಸಾಫ್ಟ್‍ವೇರ್. ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಸಾಫ್ಟ್‍ವೇರ್ ಎಂಜಿನಿಯರ್ ಉದ್ಯೋಗದಲ್ಲಿದ್ದ ವಿಜಯಕುಮಾರ್ ಹೃದಯ ಸಂಬಂಧಿ ಕಾಯಿಲೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗಿರಲಿಲ್ಲ. ಇದರಿಂದ ಅವರು ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಕಾರನ್ನು ಸ್ವಚ್ಛತೆ ಮಾಡಿಸಲೆಂದು ಮನೆಯಿಂದ ಮೊನ್ನೆ ಕಾರು ತೆಗೆದುಕೊಂಡು ಹೊರಬಂದ ವಿಜಯಕುಮಾರ್ ಪೈಪ್ ಲೈನ್ […]