ರಾಜ್ಯದಲ್ಲಿ ನಾನಾ ಅವಾಂತರಗಳನ್ನು ಸೃಷ್ಟಿಸಿದ ರಾತ್ರಿ ಸುರಿದ ಮಳೆ

ಬೆಂಗಳೂರು, ಆ.27- ರಾಜಧಾನಿ ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದ್ದು, ಭಾರೀ ಅನಾಹುತ ಸೃಷ್ಟಿಸಿದೆ. ಕಳೆದ ರಾತ್ರಿ ಬೆಂಗಳೂರು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕಲಬುರಗಿ, ಗದಗ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡಿ ಜಾಗರಣೆ ಮಾಡುವಂತಾಗಿತ್ತು. ಕೋಲಾರ: ರಾತ್ರಿ ಸುರಿದ ಮಳೆಗೆ ಕೋಳಿಫಾರಂಗೆ ನೀರು ನುಗ್ಗಿದ ಪರಿಣಾಮ ಸುಮಾರು ಸಾವಿರ ಕೋಳಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಚಲುವನಹಳ್ಳಿಯಲ್ಲಿ ನಡೆದಿದೆ. ಚೌಡಪ್ಪ ಎಂಬುವವರಿಗೆ […]