ಬೆಂಗಳೂರಲ್ಲಿ ವರುಣನ ಆರ್ಭಟ, ಹಲವು ಬಡಾವಣೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಆ.30- ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ಹಬ್ಬದ ಸಡಗರಕ್ಕೆ ವರುಣ ಅಡ್ಡಿಯಾಗಿದ್ದಾನೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವು ಬಡಾವಣೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಜನ ಜಾಗರಣೆ ಮಾಡುವಂತಾಗಿದೆ. ಹಬ್ಬದ ಸಡಗರದಲ್ಲಿರಬೇಕಾದ ಜನ ಮನೆಗೆ ನುಗ್ಗಿದ ನೀರನ್ನು ಹೊರಹಾಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಯಿ ಲೇಔಟ್, ನಾಗವಾರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಹಲವೆಡೆ ಭಾರೀ ಪ್ರಮಾಣದ ಮಳೆ ಬಿದ್ದ […]