ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

ಚೆನ್ನೈ.ಫೆ.3-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ ,ತಿರುವರೂರು, ನಾಗಪಟ್ಟಣಂ ಜಿಲ್ಲೆ ದೇರಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೇರಳ ಭಾಗದಲ್ಲಿ 64.5 ಮಿಮೀ-115.5 ಮಿಮೀ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಪುದುಚೇರಿಯಾದ್ಯಂತ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಖ್ಯಾತ ಹಿರಿಯ ನಟ ಕಾಸಿನಾಧುನಿ […]

ಸೇತುವೆ ದಾಟುವಾಗ ಕೊಚ್ಚಿಹೋದ ಬೈಕ್ ಸವಾರ

ಬೆಂಗಳೂರು,ಅ.15- ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಬೈಕ್ನಲ್ಲಿ ಸೇತುವೆ ದಾಟುವಾಗ ಸವಾರನೊಬ್ಬ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಜಾಲಹಳ್ಳಿ-ಇಡಗೂರು ಗ್ರಾಮದ ಮಧ್ಯೆ ಬೈಕ್ನಲ್ಲಿ ಸೇತುವೆ ದಾಟುವಾಗ ಸವಾರರು ಕೊಚ್ಚಿಹೋಗಿದ್ದು, ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ತುಮಕೂರು, ದಾವಣಗೆರೆಗೆ, ಬಾಗಲಕೋಟೆ ಜಿಲ್ಲೆ ಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂ ತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಒಂದೇ ದಿನಕ್ಕೆ ಬೆಂಗಳೂರಿನ 8 ವಲಯಗಳಲ್ಲಿ ಭಾರೀ ಮಳೆಯಾಗಿದೆ. ಯಲಹಂಕ 75.5 ಮಿ.ಮೀ, ಅಟ್ಟೂರು […]

ವ್ಯಾಪಕ ಮಳೆ : ತುರ್ತು ಕ್ರಮ ಕೈಗೊಳ್ಳುವಂತೆ ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಆ.28-ರಾಜ್ಯದ ವಿವಿಧೆಡೆ ಪುನಃ ವ್ಯಾಪಕ ಮಳೆಯಾಗುತ್ತಿದ್ದು, ಅಗತ್ಯವಿರುವ ಕಡೆ ಜಿಲ್ಲಾಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದವರು,ಇಂದು ಸಂಜೆ ಮಳೆಯಿಂದಾಗಿ ಹೆಚ್ಚು ಹಾನಿಗೊಳಗಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಲಾಗುವುದು ಎಂದರು. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮುಖೇನ ಮಳೆ ಹಾನಿ ಕುರಿತಂತೆ ಪ್ರಾಥಮಿಕ ವರದಿಯನ್ನು ಪಡೆದಿದ್ದೇನೆ. ಜನ-ಜಾನುವಾರುಗಳ ರಕ್ಷಣೆಗೆ ಮೊದಲ ಅದ್ಯತೆ ನೀಡಬೇಕು, ಹಾನಿಗಳ ಕುರಿತಂತೆ ಕೂಡಲೇ ವರದಿ ನೀಡಬೇಕೆಂದು […]

ಇಂಗ್ಲೀಷ್ ಬಾರದ ಮಲೆನಾಡ ರೈತರ ಗೋಳು ಕೇಳೋರು ಯಾರು ..?

ಚಿಕ್ಕಮಗಳೂರು,ಆ.21-ಸ್ವಾಮಿ ನಮಗೆ ಇಂಗ್ಲೀಷ್ ಬಂದಿದ್ದರೆ ನಾವೇಕೆ ವ್ಯವಸಾಯ ಮಾಡಬೇಕಿತ್ತು. ಯಾವುದಾದರೂ ಆಫೀಸ್‍ನಲ್ಲಿ ಏಸಿ ರೂಮ್‍ನಲ್ಲಿ ಕುಳಿತುಕೊಂಡು ಕೆಲಸ ಮಾಡುತ್ತಿದ್ದೆವು ಎಂದು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸುತ್ತಿರುವ ಕಾಫಿನಾಡಿನ ಅನ್ನದಾತರ ನೋವಿನ ಮಾತು. ಕಳೆದ ತಿಂಗಳು ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಕೈಗೆ ಬಂದ ಬೆಳೆ ನಾಶವಾಗಿದ್ದು, ಸರ್ಕಾರ ಬೆಳೆ ಪರಿಹಾರಕ್ಕೆ ಅರ್ಜಿ ಆಹ್ವಾನಿಸಿದೆ. ಆದರೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಆಂಗ್ಲಭಾಷೆಯ ಅರ್ಜಿಗಳನ್ನುನೀಡಿದ್ದಾರೆ. ಪರಿಹಾರ ಸಿಕ್ಕರೆ ಸಾಕು ಎನ್ನುವ ರೈತರು ಅದೇ ಅರ್ಜಿ ಪಡೆದು ಭರ್ತಿ […]

ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ: 4 ದಿನ ಗುಡುಗು ಮಿಂಚು ಸಹಿತ ಮಳೆ

ಬೆಂಗಳೂರು,ಆ.3- ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಆರ್ಭಟಿಸುತ್ತಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಡುಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ದೇವರಕೊಲ್ಲಿ ಹಾಗು ಕೊಯ್ನಾಡು ನಡುವಿನ ರಸ್ತೆ ಬಿರುಕು ಬಿಟ್ಟು, ಖಾಸಗಿ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳು ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಮೈಸೂರು, ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ […]

ವರುಣನ ರೌದ್ರತೆ, ತೀರದ ಸಂಕಷ್ಟ, ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು,ಜು.15- ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸ ತೊಡಗಿದೆ. ಕರಾವಳಿ, ಮಳೆನಾಡು ಭಾಗದಲ್ಲಿ ಮಳೆಯಿಂದ ಭಾರೀ ಪ್ರಮಾಣದ ಹಾನಿಯುಂಟಾಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಬೆಳಗಾವಿ, ರಾಯಚೂರು,ಬೀದರ್‍ನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಬೀದರ್ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನದಿ, ಹಳ್ಳಕೊಳ್ಳಗಳು ತುಂಬಿ ಮನೆ , ಜಮೀನು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೃಷ್ಣಾ ನದಿ ಮತ್ತೊಂದೆಡೆ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ತುಂಗಭದ್ರ […]

ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ, ಗೋಡೆ ಕುಸಿದು ತಾಯಿ-ಮಗಳು ಸಾವು

ಬೆಂಗಳೂರು, ಜು.12- ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ವರುಣನ ಆರ್ಭಟಕ್ಕೆ ಮನೆಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಮುರ್ಕುವಾಡ ಗ್ರಾಮದಲ್ಲಿ ರುಕ್ಮಿಣಿ ವಿಠ್ಠಲ ಮಾಚಕ್ಕ (37), ಶ್ರೀದೇವಿ ವಿಠ್ಠಲ ಮಾಚಕ್ಕ (17) ಗೋಡೆ ಕುಸಿದು ಸಾವನ್ನಪ್ಪಿದ ತಾಯಿ-ಮಗಳು. ರಾತ್ರಿ ನಿದ್ರೆ ಮಾಡುತ್ತಿದ್ದ ತಾಯಿ-ಮಗಳ ಮೇಲೆ ಬೆಳಗಿನ ಜಾವ ಗೋಡೆ ಕುಸಿದು […]