ಇಂದಿನಿಂದಲೇ ತುಮಕೂರಿಗೆ ಹೇಮಾವತಿ ನೀರು : ಸಚಿವ ಗೋಪಾಲಯ್ಯ

ತುಮಕೂರು, ಜು.11- ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಲು ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ನಾಲೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ನೀರು ಹರಿಸಲು ಆಗಿರಲಿಲ್ಲ, ಈಗ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇಂದಿನಿಂದಲೇ ನೀರು ಹರಿಸಲಾಗುವುದು ಎಂದರು. ಬುಗುಡನಹಳ್ಳಿ, ಮದಲೂರು ಸೇರಿದಂತೆ ಜಿಲ್ಲಾಯ ಎಲ್ಲ ಕೆರೆಗಳನ್ನು ತುಂಬಿಸುವಂತೆ ಸಚಿವ ಮಾಧುಸ್ವಾಮಿ, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಪತ್ರ ಬರೆದಿದ್ದು, ನೀರು ಹರಿಸಲು ಕ್ರಮ ವಹಿಸಲಾಗಿದೆ […]