ಜಾಮೀನು ಸಿಕ್ಕ ಬೆನ್ನಲ್ಲೇ ಮಾಡಾಳ್ ಪ್ರತ್ಯಕ್ಷ, ಅಭಿಮಾನಿಗಳಿದ ಹೂಹಾರ, ಜೈಕಾರ

ಚನ್ನಗಿರಿ,ಮಾ.7- ನಾನು ಯಾವುದೇ ಅಕ್ರಮ ಹಣ ಸಂಪಾದಿಸಿಲ್ಲ. ನನ್ನ ಮನೆಯಲ್ಲಿ ಸಿಕ್ಕ ಹಣ ಕ್ರಷರ್ ಉದ್ಯಮದಿಂದ ಹಾಗೂ ಅಡಿಕೆ ಮಾರಿ ಬಂದ ಆದಾಯವಾಗಿದ್ದು, ಅದಕ್ಕೆ ಸೂಕ್ತ ದಾಖಲೆ ಇದೆ. ಅದನ್ನು ಸಲ್ಲಿಸುತ್ತೇನೆ. ಲಂಚ ಪ್ರಕರಣದಲ್ಲಿ ನಾನು ಸಂಪೂರ್ಣ ನಿರ್ದೋಷಿ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪುತ್ರ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮೇಲೆ ನಡೆದ ದಾಳಿ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಸುಮಾರು 2 ಕೋಟಿ ಹಣ ವಶಪಡಿಸಿಕೊಂಡಿದ್ದರು. ಇದೇ ವೇಳೆ ಸದಾಶಿವನಗರದಲ್ಲಿರುವ ಅವರ ನಿವಾಸದ […]

ಇಬ್ಬರು ಉಗ್ರರಿಗೆ ಜಾಮೀನು ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಯಾಗ್‍ರಾಜ್,ಮಾ.4- ದೇಶದ ವಿರುದ್ಧ ಸಂಚು ಹಾಗೂ ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡಿದ್ದ ಇಬ್ಬರು ಉಗ್ರರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಿಡುಗಡೆಗೊಂಡ ಭಯೋತ್ಪಾದಕರನ್ನು ಮಹಮ್ಮದ್ ಮುಸ್ತಕೀಮ್ ಹಾಗೂ ಮಹಮ್ಮದ್ ಶಕೀಲ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಉಗ್ರರು ಪಾಕ್ ಮೂಲದ ಅಲ್-ಖೈದಾಗೆ ಸಂಘಟನೆಯ ಸಹ ಸಂಘಟನೆಯಾಗಿ ಗುರುತಿಸಿಕೊಂಡಿದ್ದ ಅನ್ಸಾರ್ ಘಜ್ವತ್ -ಉಲï-ಹಿಂದ್ ನ ಸದಸ್ಯರು ಎಂದು ಶಂಕಿಸಲಾಗಿದೆ. ನ್ಯಾಯಮೂರ್ತಿಗಳಾದ ಎ ಆರ್ ಮಸೂದಿ ಮತ್ತು ಒ ಪಿ ಶುಕ್ಲಾ ಅವರಿದ್ದ ಪೀಠವು ಆರೋಪಿಗಳಿಗೆ […]

ಅಗ್ನಿಪತ್ ಯೋಜನೆಗೆ ನ್ಯಾಯಾಲಯದ ಬೆಂಬಲ : ಆಕ್ಷೇಪಣಾ ಅರ್ಜಿಗಳು ವಜಾ

ನವದೆಹಲಿ,ಫೆ.27- ಸೇನೆಯ ನೇಮಕಾತಿಯಲ್ಲಿ ಕಳೆದ ವರ್ಷ ಜಾರಿಗೊಳಿಸಲಾಗಿದ್ದ ಹೊಸ ಯೋಜನೆ ಅಗ್ನಿಪತ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಗುಚ್ಚವನ್ನು ದೆಹಲಿ ಹೈಕೋರ್ಟ್ ಇಂದು ವಜಾಗೊಳಿಸಿದೆ. ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆ ಮತ್ತು ಸಶಸ್ತ್ರ ಪಡೆಗಳನ್ನು ಸುಸಜ್ಜಿತಗೊಳಿಸಲು ಅಗ್ನಿಪತ್ ಪೂರಕವಾಗಿದೆ ಎಂದು ದೆಹಲಿ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠ ಅಭಿಪ್ರಾಯಪಟ್ಟಿದ್ದು, ಯೋಜನೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಹೇಳಿ ತರಕಾರು ಅರ್ಜಿಗಳನ್ನು ವಜಾಗೊಳಿಸಿದೆ. ಕನ್ನಡಿಗನ ಸಂಶೋಧನೆ: ಮಕ್ಕಳಿಗೆ […]

ಗರ್ಭ ಮುಂದುವರೆಸುವ, ತೆಗೆಸುವ ಅಧಿಕಾರ ಮಹಿಳೆಗೆ ಮಾತ್ರ ಸೇರಿದೆ : ಬಾಂಬೆ ಹೈಕೋರ್ಟ್

ಮುಂಬೈ,ಜ.23- ಗರ್ಭವನ್ನು ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ನಿರ್ಧಾರ ಕೈಗೊಳ್ಳುವ ಹಕ್ಕು ಮಹಿಳೆಗೆ ಮಾತ್ರವಿದ್ದು, ಆಕೆ ಮಾತ್ರ ಅದನ್ನು ನಿರ್ಧರಿಸಬೇಕು ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ಅಸಹಜತೆಯಿಂದ ಕೂಡಿದ ತನ್ನ 32 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ವಿವಾಹಿತ ಮಹಿಳೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠ ತೀರ್ಪು ನೀಡಿದೆ. ಗರ್ಭೀಣಿ ಮಹಿಳೆಯನ್ನು ಸೋನೋಗ್ರಫಿಗೆ ಒಳಪಡಿಸಿದಾಗ ಭ್ರೂಣವು ಅಸಹಜತೆಗಳನ್ನು ಹೊಂದಿದ್ದು, ದೈಹಿಕ ಮತ್ತು ಮಾನಸಿಕ ವಿಕಲಾಂಗತೆಯೊಂದಿಗೆ […]

ಆದಿಯೋಗಿ ಪ್ರತಿಮೆ ಉದ್ಘಾಟನೆಗೆ ಹೈಕೋರ್ಟ್ ಹಸಿರು ನಿಶಾನೆ

ಬೆಂಗಳೂರು,ಜ.13- ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಶಾ ಯೋಗ ಕೇಂದ್ರದ ಆದಿಯೋಗಿ ಪ್ರತಿಮೆಯನ್ನು ಜನವರಿ 15 ರಂದು ಉದ್ಘಾಟಿಸಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಆದರೆ, ಸ್ಥಳದಲ್ಲಿ ನಿರ್ಮಾಣ ಚಟುವಟಿಕೆಗಳ ಬಗ್ಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಅರಣ್ಯ ಮತ್ತು ಭೂ ಸ್ವಾೀಧಿನಕ್ಕೆ ಸಂಬಂಧಿಸಿದ ವಿವಿಧ ನಿಯಮಗಳು ಮತ್ತು ಕಾನೂನುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಲಾಗಿದ್ದ ಅರ್ಜಿ ಆಧರಿಸಿ ಜನವರಿ 11ರಂದು ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಶುಕ್ರವಾರ, ಈಶಾ ಯೋಗ ಕೇಂದ್ರದ ಪರ ವಕೀಲರು, ಮುಖ್ಯ […]

ಮೆಟ್ರೋ ಪಿಲ್ಲರ್ ದುರಂತ : ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು,ಜ.13-ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಮಾಧ್ಯಮಗಳ ವರದಿಯನ್ನಾಧರಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್ ರಾಜ್ಯ ಸರ್ಕಾರ, ಬಿಎಂಆರ್‍ಸಿಎಲ್ ಹಾಗೂ ಬಿಬಿಎಂಪಿಯನ್ನು ಪ್ರತಿವಾದಿಯನ್ನಾಗಿಸಿಕೊಂಡಿದೆ. ನಿರ್ಮಾಣ ಹಂತದ ಪಿಲ್ಲರ್ ಕುಸಿದು ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಮೆಟ್ರೋ ಮಾರ್ಗದ ರಸ್ತೆ ಗುಂಡಿ ಬಿದ್ದಿದೆ ಇಂತಹ ಘಟನೆಗಳು ರಸ್ತೆ ಸುರಕ್ಷತೆ ಬಗ್ಗೆ ಚಿಂತೆಗೀಡು ಮಾಡಿದೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್ […]

ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಮುಖ್ಯಸ್ಥೆ ಕೊಚ್ಚರ್ ಬಿಡುಗಡೆ

ನವದೆಹಲಿ,ಜ.9- ಅವ್ಯವಹಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್‍ನ ಮಾಜಿ ಮುಖ್ಯಸ್ಥೆ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡಲಾಗಿದೆ. ಚಂದಾ ಕೊಚ್ಚರ್ ಹಾಗೂ ಆಕೆಯ ಪತಿಯ ಬಂಧನ ಕಾನೂನು ಪ್ರಕಾರ ನಡೆದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದ ನಂತರ ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ. ಚಂದಾ ಕೊಚ್ಚರ್ ಬ್ಯಾಂಕ್ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ವಿಡಿಯೋಕಾನ್ ಗ್ರೂಫ್‍ಗೆ 3 ಸಾವಿರ ಕೋಟಿ ರೂ.ಗಳನ್ನು ಸಾಲವಾಗಿ ನೀಡಿ ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ […]

ರಸ್ತೆ ಗುಂಡಿ ಅಪಘಾತ, ತಾಂತ್ರಿಕ ಕಾರಣ ನೀಡದೆ ಎಫ್‍ಐರ್ ದಾಖಲಿಸಿ : ಹೈಕೋರ್ಟ್

ಬೆಂಗಳೂರು,ಡಿ.15- ರಾಜಧಾನಿ ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳಿಂದ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡವರು ಮತ್ತು ಸಾವನ್ನಪ್ಪುವ ಪ್ರಕರಣಗಳಲ್ಲಿ ದೂರು ದಾಖಲಿಸಲು ಬರುವ ಸಾರ್ವಜನಿಕರಿಗೆ ತಾಂತ್ರಿಕ ಕಾರಣಗಳನ್ನು ನೀಡದೆ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ […]

ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಜಾಮೀನು ಮಂಜೂರು

ಮುಂಬೈ,ಡಿ.12- ಭ್ರಷ್ಟಾಚಾರ ಆರೋಪಕ್ಕಾಗಿ ಸಿಬಿಐನಿಂದ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್‍ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ ದೇಶ್‍ಮುಖ್ ಜೈಲಿನಿಂದ ಬಿಡುಗಡೆಯಾಗಿಲ್ಲ. ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ಕಾಲಾವಕಾಶ ನೀಡಿ ಹೈಕೋರ್ಟ್‍ಜಾಮೀನನ್ನು 10 ದಿನಗಳ ಕಾಲ ತಟಸ್ಥವಾಗಿರಿಸಿದೆ. ಎನ್.ಎಸ್.ಕಾರ್ನಿಕ್ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿಯ ಪರ-ವಿರೋಧ ವಾದ ಆಲಿಸಿದ ಬಳಿಕ ತೀರ್ಪು ನೀಡಿದೆ. 74 ವರ್ಷದ ಅನಿಲ್ ದೇಶ್‍ಮುಖ್ ಅವರ ಜಾಮೀನು ಅರ್ಜಿಯನ್ನು ಕಳೆದ ತಿಂಗಳು ಸಿಬಿಐ ವಿಶೇಷ ನ್ಯಾಯಾಲಯ […]

ಇಷ್ಟು ದಿನ ನೀವು ಪೂಜಿಸಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ : ಮದ್ರಾಸ್ ಹೈಕೋರ್ಟ್

ಚೆನ್ನೈ,ಡಿ.10- ನೀವು ಇಷ್ಟು ದಿನ ಪೂಜೆ ಮಾಡಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ, ಹೀಗಾಗಿ ಇನ್ಮುಂದೆ ನೀವು ಆ ದೇವರನ್ನು ಪೂಜಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿರುವ ತಲೈವೆಟ್ಟಿ ಮುನಿಯಪ್ಪನ್ ದೇವಾಲಯದಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಪೂಜೆ, ಆಚರಣೆಗಳನ್ನು ನಿಷೇಧ ಮಾಡಿ, ಮಾತ್ರವಲ್ಲ ದೇವಾಲಯದ ಪ್ರಾಂಗಣದಲ್ಲಿ ಬುದ್ಧನ ಶಿಲ್ಪ ಇರುವ ಕುರಿತು ನಾಮಫಲಕ ಆಳವಡಿಸುವಂತೆಯೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಇಡೀ ಊರಿನ […]